ಬಳಿಕೀ ಮಾಡಿದಾತಂಗೆ ಪ್ರಕಾರಮಾದ

ವಿಕಿಸೋರ್ಸ್ದಿಂದ



Pages   (key to Page Status)   


ಬಳಿಕೀ ಪ್ರಕಾರಮಾದ ಹಠಯೋಗರೂಪಮಪ್ಪ ಅಷ್ಟಾಂಗಗಳಂ ನಿರಾಲಸ್ಯದಿಂ ಎಡೆಬಿಡುವಿಲ್ಲದೆ ಮಾಡಿದಾತಂಗೆ ಆಗುವ ಸಿದ್ಧಿಪ್ರಕಾರಗಳೆಂತೆನೆ : ಮೊದಲನೆಯ ವರ್ಷದಲ್ಲಿ ನಿರೋಗಿಯಾಗಿ ಸಕಲಜನ ಪ್ರೀತನಾಗುವನು. ಎರಡನೆಯ ವರ್ಷದಲ್ಲಿ ಸುಸಂಸ್ಕøತ ಭಾಷೆಯಿಂದ ಕವಿತ್ವವಂ ಮಾಡುವನು. ಮೂರನೆಯ ವರ್ಷದಲ್ಲಿ ಸರ್ಪಾದಿ ದುಷ್ಟಪ್ರಾಣಿಗಳಿಂದೆ ಬಾಧಿಸಿಕೊಳ್ಳುತಿರನು. ನಾಲ್ಕನೆಯ ವರ್ಷದಲ್ಲಿ ಹಸಿವು ತೃಷೆ ವಿಷಯ ನಿದ್ರೆ ಶೋಕ ಮೋಹಾದಿಗಳಂ ಬಿಡುವನು. ಐದನೆಯ ವರ್ಷದಲ್ಲಿ ದೂರಶ್ರವಣ ವಾಕ್ಸಿದ್ಧಿ ಪರಕಾಯಪ್ರವೇಶಾಧಿಕವುಳ್ಳಾತನಹನು. ಆರನೆಯ ವರ್ಷದಲ್ಲಿ ವಜ್ರಾದ್ಯಾಯುಧಗಳಿಂದೆ ಭೇದಿಸಲ್ಪಡದಾತನಾಗಿ
ಶೀಘ್ರಗಾಮಿಯಾಗಿ ದೂರದರ್ಶನವುಳ್ಳಾತನಾಗುವನು. ಏಳನೆಯ ವರ್ಷದಲ್ಲಿ ಖೇಚರಗಾಮಿಯಾಗುವನು. ಎಂಟನೆಯ ವರ್ಷದಲ್ಲಿ ಅಣಿಮಾದಿ ಅಷ್ಟಮಹದೈಶ್ವರ್ಯಸಂಪನ್ನನಾಹನು. ಒಂಬತ್ತನೆಯ ವರ್ಷದಲ್ಲಿ ಸ್ವೇಚ್ಛಾಗಮನಿಯಾಗಿ ವಜ್ರಶರೀರಿಯಾಹನು. ಹತ್ತನೆಯ ವರ್ಷದಲ್ಲಿ ಮನೋಯೋಗಿಯಾಗಿ ಇಚ್ಛಾವಿಷಯಂಗಳ ಪಡೆಯುವನು. ಹನ್ನೊಂದನೆಯ ವರ್ಷದಲ್ಲಿ ಸಕಲ ಲೋಕಂಗಳಿಗೆ ಆಜ್ಞಾಕರ್ತೃವಾಹನು. ಹನ್ನೆರಡನೆಯ ವರ್ಷದಲ್ಲಿ ಶಿವನ ಸಮಾನವಾಗಿ ಸೃಷ್ಟಿಸ್ಥಿತಿಲಯಂಗಳಂ ಮಾಡುತಿರ್ಪುದೇ ಹಠಯೋಗಸಿದ್ಧಿ ನೋಡಾ ಅಖಂಡೇಶ್ವರಾ.