ಬಸವೇಶ್ವರದೇವರು ತೃಣಪುರುಷನ ಮಾಡಿ

ವಿಕಿಸೋರ್ಸ್ದಿಂದ



Pages   (key to Page Status)   


ಬಸವೇಶ್ವರದೇವರು ತೃಣಪುರುಷನ ಮಾಡಿ `ಮೀಮಾಂಸಕಂಗೆ ಉತ್ತರವ ಕೊಡು ಹೋಗು' ಎನಲು ಆ ತೃಣಪುರುಷನು ಮಹಾಪ್ರಸಾದವೆಂದು ಕೈಕೊಂಡು
ಮೀಮಾಂಸಕಂಗೆ ಉತ್ತರವ ಕೊಟ್ಟು ಶಿವವಿರಹಿತವಾದ ಕಾಳ್ಪುರಾಣವೆಲ್ಲವ ಬಯಲು ಮಾಡಿ ನುಡಿಯಲು ಆತಂಗೆ ಶಿವಜ್ಞಾನ ತಲೆದೋರಿ
ಆ ಬಸವೇಶಂಗೆ ವಂದನಂಗೈದು ಉಪದೇಶವ ಮಾಡಬೇಕೆನಲು
ಆತಂಗೆ ವೀರಶೈವದೀಕ್ಷೆಯ ಮಾಡಿ ಷಟ್‍ಸ್ಥಲಮಾರ್ಗ ಕ್ರೀಯ ನಿರೂಪಿಸಿ ತಿಳುಹಲು `ಎಲೆ ಬಸವೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟುಕೊಳಬಹುದೆರಿಱ ಎಂದು ಕೇಳಲು
ಕೇಳೈ ಮೀಮಾಂಸಕಾ
ಪೂರ್ವದಲ್ಲಿ ಪರಮೇಶ್ವರನು ಸಮಸ್ತ ದೇವತೆಗಳು ಒಡ್ಡೋಲಗದಲ್ಲಿರಲು ಸೂತ್ರಿಕನೆಂಬ ಶೈವಾಚಾರ್ಯನು `` ಎಲೆ ಪರಮೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಹುದೆರಿ' ಎನಲು `ಎಲೆ ಸೂತ್ರಿಕನೆ ಕೇಳು ನಾನೆಂದಡೆಯೂ ಜಂಗಮವೆಂದಡೆಯೂ ಬೇರಿಲ್ಲ ಅದು ಕಾರಣ ಜಂಗಮವೆ ಅಧಿಕ. ನೀನಾ ಜಂಗಮಲಿಂಗದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಾರದೆಂದು ನಿಂದಿಸಿ ನುಡಿದ ವಾಗ್ದೋಷಕ್ಕೆ ಮತ್ರ್ಯಕ್ಕೆ ಹೋಗಿ ಹೊಲೆಯನ ಮನೆಯ ಸೂಕರನ ಬಸುರಲ್ಲಿ ಹುಟ್ಟಿ ಹದಿನೆಂಟು ಜಾತಿಯ ಅಶುದ್ಧವನು ನಾಲಗೆಯಲಿ ಭುಂಜಿಸಿ ನರಕಜೀವಿಯಾಗಿರುಱಱ ಎಂದುದೆ ಸಾಕ್ಷಿ. ಇದನರಿದು ಮತ್ತೆ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳಲಾಗದೆಂಬ ಪಂಚಮಹಾಪಾತಕರ ಮಾತ ಕೇಳಲಾಗದು. ಅದೆಂತೆಂದಡೆ:ವೀರಾಗಮದಲ್ಲಿ
ಜಂಗಮಾನಾಮಹಂ ಪ್ರಾಣೋ ಮಮ ಪ್ರಾಣೋ ಹಿ ಜಂಗಮಃ ಜಂಗಮೇನ ತ್ವಹಂ ಪೂಜ್ಯೋ ಮಯಾ ಪೂಜ್ಯೋ ಹಿ ಜಂಗಮಃ ಪರಸ್ಪರಮಭೇದತ್ವಾಜ್ಜಂಗಮಸ್ಯ ಮಮಾಪಿ ಚ ಪಾದೋದಕಪ್ರಸಾದಾಭ್ಯಾಂ ವಿನಾ ತೃಪ್ತಿರ್ನ ಜಾಯತೇ ಇಂತೆಂಬ ಶಿವನ ವಾಕ್ಯವನರಿದು
ಜಂಗಮದ ಪಾದತೀರ್ಥವ ಲಿಂಗಕ್ಕೆ ಮಜ್ಜನಕ್ಕೆರೆದು ಪ್ರಸಾದವ ಲಿಂಗಕ್ಕೆ ನೈವೇದ್ಯವ ಸಮರ್ಪಿಸಿ ಭೋಗಿಸುವಾತನೆ ಸದ್ಭಕ್ತ
ಆತನೆ ಮಾಹೇಶ್ವರ
ಆತನೆ ಪ್ರಸಾದಿ
ಆತನೆ ಪ್ರಾಣಲಿಂಗಿ
ಆತನೆ ಶರಣ
ಆತನೆ ಐಕ್ಯನು. ಇಂತಪ್ಪ ಷಟ್‍ಸ್ಥಲಬ್ರಹ್ಮಿಗೆ ನಮೋ ನಮೋ ಎಂಬೆ. ಇಂತಲ್ಲದೆ ಜಂಗಮದ ಪಾದತೀರ್ಥಪ್ರಸಾದರಹಿತನಾಗಿ ಆವನಾನೊಬ್ಬನು ತನ್ನ ಇಷ್ಟಲಿಂಗಕ್ಕೆ ಅರ್ಷವಿಧಾರ್ಚನೆ ಷೋಡಶೋಪಚಾರಕ್ರೀಯಿಂದ ಪೂಜೆಯ ಮಾಡುವಲ್ಲಿ ಅವನು ಶುದ್ಧಶೈವನು
ಅವನಿಗೆ ಮುಕ್ತಿಯಿಲ್ಲ ಕಾಣಾ ಕೂಡಲಚೆನ್ನಸಂಗಮದೇವಾ.