ಬ್ರಹ್ಮಪದವ ಪಡೆದೆನೆಂಬುದು ಭ್ರಮೆ

ವಿಕಿಸೋರ್ಸ್ದಿಂದ



Pages   (key to Page Status)   


ಬ್ರಹ್ಮಪದವ ಪಡೆದೆನೆಂಬುದು ಭ್ರಮೆ ಕಾಣಿರೋ. ವಿಷ್ಣುಪದವ ಪಡೆದೆನೆಂಬುದು ತೃಷ್ಣೆ ಕಾಣಿರೋ. ಇಂದ್ರಪದವ ಪಡೆದೆನೆಂಬುದು ಬಂಧನ ಕಾಣಿರೆಲವೋ ಮರುಳು ಮಾನವರಿರಾ. ದೇವಾತಾದಿಭೋಗಂಗಳ ಪಡೆದಿಹೆನೆಂದು ಪರಿಣಾಮಿಸುವ ಗಾವಿಲರನೇನೆಂಬೆನಯ್ಯ? ದನುಜಪದ ನಿತ್ಯವೆಂಬ ಮನುಜರ ಮರುಳತನವ ನೋಡಾ. ಬ್ರಹ್ಮವಿಷ್ಣು ಇಂದ್ರಾದಿಗಳಿಗೊಡೆಯನಾದ ರುದ್ರನ ಪದವ ಪಡೆದೆನೆಂಬುದು- ಅದು ಅಂತಿರಲಿ. ಅದೇನು ಕಾರಣವೆಂದರೆ: ಇವೆಲ್ಲವೂ ಅನಿತ್ಯಪದವಾದ ಕಾರಣ. ಇವೆಲ್ಲ ಪದಂಗಳಿಗೂ ಮೇಲಾದ ಮಹಾಲಿಂಗ ಪದವೇ ನಿತ್ಯತ್ವಪದ. ಆ ಮಹಾಲಿಂಗ ಪದದೊಳಗೆ ಸಂಯೋಗವಾದ ಘನಲಿಂಗ ಪದಸ್ಥ ಶರಣನು ತನಗನ್ಯವಾಗಿ ಒಂದು ವಸ್ತುವ ಬಲ್ಲನೇ ಅನನ್ಯ ಶರಣನು? ಇದು ಕಾರಣ
ತನುವ ಬಳಲಿಸಿ ತಪವಮಾಡಿ ಫಲಪದವ ಪಡೆದು ಭೋಗಿಸಿಹೆನೆಂಬವರ ವಿಧಿಯೆಲ್ಲ ಹಂದಿ ತಪವಮಾಡಿ ಹಾಳು[ಗೇರಿ]ಯ ಹಡೆದಂತಾಯಿತ್ತು ಕಾಣಾ. ಶಿವಪದವಲ್ಲದೆ ಉಳಿದ ಪದವೆಲ್ಲಾ ಹುಸಿ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.