ವಿಷಯಕ್ಕೆ ಹೋಗು

ಭಕ್ತ ಮಾಡಿಹನೆಂಬಿರಿ, ಭಕ್ತ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಭಕ್ತ ಮಾಡಿಹನೆಂಬಿರಿ
ಭಕ್ತ ಮಾಡಿಹನೆಂಬಿರಿ;_ ಭಕ್ತ ಮಾಡಿಹನೆಂದು ಗೆಗ್ಗೆವಾಯ್ದುಕೊಳ್ಳಲಾಗದು. ಅದೇಕೆಂದಡೆ: ಭಕ್ತನು ಅಸ್ತಿ ನಾಸ್ತಿ ಅರಿಯದನ್ನಕ್ಕ
ಉಂಟು ಇಲ್ಲವೆಂದು ತಿಳಿಯದನ್ನಕ್ಕ ಮಾಡಿತ್ತೇ ಗೆಲ್ಲ ಎಂದುಕೊಂಡಡೆ ಆ ಸುಳುಹಿಂಗೆ ಭಂಗ. ತೂಳವೆತ್ತಿದಾತನು ಇರಿದುಕೊಂಬುದು
ಭೂತದ ಗುಣವಲ್ಲದೆ ವೀರದ ಗುಣವಲ್ಲ. ಸ್ವೇಚ್ಛಾತುರದ ಮಾಟವೊ ? ಮುಕ್ತ್ಯಾತುರದ ಮಾಟವೊ ? ರಿಣಾತುರದ ಮಾಟವೊ ?_ಎಂಬುದ ತಿಳಿಯಬೇಕಲ್ಲದೆ ಕೊಂಡುದೆ ಕೋಳಾಗಿ ಹೋಹನ್ನಕ್ಕರ ಜಂಗಮಲಕ್ಷಣವಲ್ಲ. ತುಂಬಿದ ಬಂಡಿಯ ಹಾರವನರಿದು ನಡೆಸುವನ ಜಾಣಿಕೆಯಂತಿರಬೇಡಾ ಲಿಂಗಜಾಣರು ? ಸ್ವೇಚ್ಛಾತುರವನಾಚರಿಸುವ ಜಂಗಮಕ್ಕೆ ಭವಂ ನಾಸ್ತಿ ಮುಕ್ತ್ಯಾತುರವನಾಚರಿಸುವ ಜಂಗಮಕ್ಕೆ ಭವ ಹಿಂಗದು. ರಿಣಾತುರವನಾಚರಿಸುವ ಜಂಗಮಕ್ಕೆ ಯಮದಂಡನೆ. ಹರಿದು ಬರಲಿ ಕಿತ್ತು ಬರಲಿ ಅವನೇನಾದರೂ ಆಗಲಿ ನಾನು ತೆಕ್ಕೊಂಡು ಹೋದೆನೆಂಬನ್ನಕ್ಕರ ಜಂಗಮಲಕ್ಷಣವಲ್ಲ
_ ಜಂಗಮ ಕರುಣರಸಭರಿತನಾಗಿ
ಭಕ್ತನಲ್ಲಿ ಜಂಗಮದಲ್ಲಿ ಭಾವಭೇದವಿಲ್ಲಾಗಿ. ಇಂತೀ ಕ್ರಮಾದಿಕ್ರಮಂಗಳನರಿದು ಸುಳಿಯದಿದ್ದಡೆ ನಿರ್ವಯಲಸ್ಥಲಕ್ಕೆ ದೂರ ಕಾಣಾ ಗುಹೇಶ್ವರಾ.