ವಿಷಯಕ್ಕೆ ಹೋಗು

ಭಕ್ತನಾದರೆ ತನುಮನಧನದಾಸೆ ಅಳಿದುಳಿದಿರಬೇಕು.

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಭಕ್ತನಾದರೆ ತನುಮನಧನದಾಸೆ ಅಳಿದುಳಿದಿರಬೇಕು. ಮಾಹೇಶ್ವರನಾದರೆ ಪರಧನ ಪರಸತಿಯಾಸೆಯಳಿದು ಉಳಿದಿರಬೇಕು. ಪ್ರಸಾದಿಯಾದಡೆ ಪ್ರಸಾದ ಅವಗ್ರಾಹಿಯಾಗಿ
ಪ್ರಸಾದದ ಘಟವಳಿಯದೆ ಉಳಿದಿರಬೇಕು. ಪ್ರಾಣಲಿಂಗಿಯಾದರೆ ಸುಖ-ದುಃಖವ ಮರೆದು ಪ್ರಾಣಲಿಂಗದಲ್ಲಿ ಪರಿಣಾಮಿಯಾಗಿರಬೇಕು. ಶರಣನಾದರೆ ಸತಿಯರ ಸಂಗವ ತೊರೆದು ತಾನು ಲಿಂಗಕ್ಕೆ ಸತಿಯಾಗಿರಬೇಕು_ ಲಿಂಗೈಕ್ಯನಾದರೆ ಲಿಂಗದಲ್ಲಿ ಬೆರಸಿ ಬೇರಿಲ್ಲದಿರಬೇಕು
ಕೂಡಲಚೆನ್ನಸಂಗಯ್ಯಾ.