ಭವಭವದಲ್ಲಿ ಭಕ್ತನಾದಡೆ ಆ ಭವವೆ ಲೇಸು ಕಂಡಯ್ಯಾ. ಲಿಂಗಾರಾಧನೆ ಜಂಗಮಾನುಭವ ಅಂದಂದಿಗೆ ಪರಮಸುಖವಯ್ಯಾ. ಎಂದೆಂದೂ ನಾನಿದನೆ ಬಯಸುವೆ ತಂದೆ ಕರುಣಿಸಯ್ಯಾ ಕೂಡಲಸಂಗಮದೇವಾ.