ಮಾಮರದೊಳಗೊಂದು ಮಾಯದ ಮಂಜು ಕವಿದಡೆ ಹೂ ಮಿಡಿ ಫಲಂಗಳು ಉದುರವಿನ್ನೆಂತೊ ? ಮಂಜಿನ ರಸವನುಂಡು ಫಲ ನಿಮಿರ್ದು ಬೆಳೆದಡೆ ಆ ಫಲವ ನಾನು ಮುಟ್ಟೆನು ಕಾಣಾ ಗುಹೇಶ್ವರಾ.