ಲಿಂಗ ಜಂಗಮ ಒಂದೆ ಎಂದು ನಂಬಿದ ಬಳಿಕ ಅವರಂಗನೆಯರು ಲಿಂಗದ ರಾಣಿವಾಸ. ಅಲ್ಲಿಯೂ ಮೇಳ ಇಲ್ಲಿಯೂ ಮೇಳ ಚೌಡೇಶ್ವರಿಯಲ್ಲಿಯೂ ಮೇಳವೇ ಮೊಲೆಯುಂಬ ಭಾವ ತಪ್ಪಿ ಅಪ್ಪಿದವರ ತಲೆಯ ಕೊಂಬ ಕೂಡಲಸಂಗಮದೇವ.