ಲಿಂಗದಿಂದ ಶರಣರುದಯಯವಾಗದಿರ್ದಡೆ
ಬಸವ ಚೆನ್ನಬಸವ ಪ್ರಭುದೇವರು ಮುಖ್ಯವಾದ ಏಳುನೂರುಯೆಪ್ಪತ್ತು ಅಮರಗಣಂಗಳು ಎಲ್ಲರೂ ಕ್ಷೀರ ಕ್ಷೀರವ ಬೆರಸಿದಂತೆ
ನೀರು ನೀರು ಬೆರಸಿದಂತೆ
ಘೃತ ಘೃತವ ಬೆರಸಿದಂತೆ
ಬಯಲು ಬಯಲ ಬೆರಸಿದಂತೆ ಲಿಂಗವ ಬೆರಸಿ ಮಹಾಲಿಂಗವೆಯಾದರು ನೋಡ. ಲಿಂಗದಿಂದ ಶರಣರುದಯವಾಗದಿರ್ದಡೆ
ನೀಲಲೋಚನೆಯಮ್ಮ ಲಿಂಗದೊಳಗೆ ತನ್ನಂಗವನೇಕೀಕರಿಸಿ
ಕೇವಲ ಪರಂಜ್ಯೋತಿರ್ಲಿಂಗದಲ್ಲಿ ನಿರವಯವಾದಳು ನೋಡಾ. ಇಂತಪ್ಪ ದೃಷ್ಟವ ಕಂಡು ನಂಬದಿರ್ಪುದು ಕರ್ಮದ ಫಲ. ಅದು ಇವರ ಗುಣವೆ? ಶಿವನ ಮಾಯಾಪ್ರಪಂಚಿನ ಗುಣ ನೋಡಾ. ಈ ಪ್ರಪಂಚುಜೀವಿಗಳು ಅಲ್ಲ ಎಂಬುದು
ಅಹುದೆಂಬುದು ಪ್ರಮಾಣೆ? ಅಲ್ಲ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.