ಲಿಂಗನಿಷ್ಠೆ ಪೂಜೆಯಲ್ಲಿ ಬೀಯವಾಯಿತ್ತು [ಜಂಗಮ]ನಿಷ್ಠೆ ತ್ಯಾಗದಲ್ಲಿ ಬೀಯವಾಯಿತ್ತು ಪ್ರಸಾದನಿಷ್ಠೆ ಬೆರಕೆಯಲ್ಲಿ ಬೀಯವಾಗಿತ್ತು. ಒಂದೊಂದರ ನಿಷ್ಠೆ ಅಂದಂದಿಗೆ ಬೀಯವಾಗಿತ್ತು ಕೂಡಲಸಂಗಮದೇವನ ಭಕ್ತಿ ತ್ರಿಜಗವನಾಳಿಗೊಂಡಿತ್ತು.