ಲಿಂಗಸ್ಥಲವಿಲ್ಲದವರ ಭಕ್ತರೆಂಬೆ ಗುರುಸ್ಥಲವಿಲ್ಲದವರ ಪ್ರಸಾದಿಗಳೆಂಬೆ (ಶಿಷ್ಯರೆಂಬೆ?) ಪ್ರಸಾದಿಸ್ಥಲವಿಲ್ಲದವರ ಜಂಗಮವೆಂಬೆ ಈ ತ್ರಿವಿಧಸ್ಥಲವಿಲ್ಲದವರ ಶರಣರೆಂಬೆ. ಇದು ಕಾರಣ ಕೂಡಲಚೆನ್ನಸಂಗನಲ್ಲಿ ಭವಿಸಹಿತವಾಗಿದ್ದಾತನ ಲಿಂಗೈಕ್ಯನೆಂಬೆ.