ವಚನದ ರಚನೆಯೆಂಬ ಮಾತಿನ ಬಣ್ಣದ ಪರಿಯಲ್ಲ ನೋಡಾ. ಹೊಲಳಿ ಕಂಡವರೆಲ್ಲರು ಮೂರ್ತಿಗೊಳಗಾದರು. ವೇದ ಶಾಸ್ತ್ರ ಮಾರ್ಗವೆಲ್ಲವೂ ಹೊಗಳಿ ಕಾಣವೆಂಬುದ ಗುಹೇಶ್ವರ ಸಾಕ್ಷಿಯಾಗಿ ಮೂರುಲೋಕ ಬಲ್ಲುದು ಕಾಣಾ ಸಿದ್ಧರಾಮಯ್ಯಾ.