ವಶ್ಯವ ಬಲ್ಲೆವೆಂದೆಂಬಿರಯ್ಯಾ ಬುದ್ಧಿಯನರಿಯದ ಮನುಜರು ಕೇಳಿರಯ್ಯಾ. ವಶ್ಯವಾವುದೆಂದರಿಯದೆ ಮರುಳುಗೊಂಬಿರಿ ಎಲೆ ಗಾವಿಲ ಮನುಜರಿರಾ. ಓಂ ನಮಃ ಶಿವಾಯ ಎಂಬ ಮಂತ್ರ ಸರ್ವಜನವಶ್ಯ ಕೂಡಲಸಂಗಮದೇವಾ. 78