ವೀರಶೈವಸಂಪನ್ನರಾದ ಸದ್ಭಕ್ತ ಶರಣಗಣಂಗಳಾದಡೆಯೂ

ವಿಕಿಸೋರ್ಸ್ದಿಂದ



Pages   (key to Page Status)   


ವೀರಶೈವಸಂಪನ್ನರಾದ ಸದ್ಭಕ್ತ ಶರಣಗಣಂಗಳಾದಡೆಯೂ ವೀರಮಾಹೇಶ್ವರರಾದಡೆಯೂ ಕ್ರಿಯಾಪಾದೋದಕ ಮಾಡಬೇಕಾದಡೆ
ತನ್ನ ಎರಡು ಅಂಗುಲಗಳಿಂದ
ಆ ಮಾಹೇಶ್ವರರ ಅಂಗುಷ್ಠ ಎಂಟು ಅಂಗುಲಗಳಲ್ಲಿ ತರ್ಜನಿ ಬೆರಳಿನಿಂದ ಬಲದ ಪಾದಾಂಗುಷ್ಠದ ಮೇಲೆ ಮೂರು ವೇಳೆ ಸ್ಪರ್ಶನವ ಮಾಡಿ
ನಾಲ್ಕನೆಯ ವೇಳೆಗೆ ಅದೇ ಬಲಪಾದದ ನಾಲ್ಕು ಬೆರಳುಗಳನ್ನು ಒಂದು ವೇಳೆ ಸ್ಪರ್ಶನ ಮಾಡಿದಡೆ ಗುರುಪಾದೋದಕವೆನಿಸುವುದು. ಇದೇ ರೀತಿಯಲ್ಲಿ ಎಡದ ಪಾದವ ಮಾಡಿದಡೆ ಲಿಂಗೋದಕವೆನಿಸುವುದು. ಈ ಎರಡರ ಕೂಟವೆ ಜಂಗಮಪಾದೋದಕವೆನಿಸುವುದು. ತನ್ನ ಹಸ್ತದಿಂದ ಪಾದವ ಮುಟ್ಟಿ ಮಾಡಿದಂತಹದೆ ಸ್ಪರ್ಶನೋದಕವೆನಿಸುವುದು. ಆ ಪಾದದ ಮೇಲಣ ದ್ರವವ ತೆಗೆದಂತಹದೆ ಅವಧಾನೋದಕವೆನಿಸುವುದು. ಅದರ ಮೇಲಣ ಅಪೇಕ್ಷೆ ಮುಂದುಗೊಂಡು ತಾನು ಮಾಡಿಕೊಂಡಂತಹದೆ ಅಪ್ಯಾಯನೋದಕವೆನಿಸುವುದು. ಹಸ್ತದಿಂದ ಮುಟ್ಟಿ ಮಾಡಿದಂತಹದೆ ಹಸ್ತೋದಕವೆನಿಸುವುದು. ಆ ಭಾಜನವ ತನ್ನ ಕೈಯಲ್ಲಿ ತೆಗೆದುಕೊಂಡು ಆ ಜಂಗಮಕ್ಕೆ ನಮಸ್ಕರಿಸುವಂತಹದೆ ನಿರ್ಣಾಮೋದಕವೆನಿಸುವುದು. ಆ ಜಂಗಮಕ್ಕೆ ನಮಸ್ಕರಿಸಿ ಆ ಭಾಜನವನ್ನು ತನ್ನ ಕ್ರಿಯೆಗೆ ಇಟ್ಟುಕೊಂಡಂತಹುದೆ ಸತ್ಯೋದಕವೆನಿಸುವುದು_ ಈ ಪ್ರಕಾರದಲ್ಲಿ ಹತ್ತು ಪಾದೋದಕವು
ಶಿಕ್ಷಾಪಾದೋದಕದಲ್ಲಿ ಆಗುವುದೆಂದು ಅರಿದು ಆಚರಿಸುವುದು. ಆಚರಿಸಲಾಗದೆಂಬ ಹಚ್ಚಮಾನವರನೇನೆಂಬೆನಯ್ಯಾ ಕೂಡಲಚೆನ್ನಸಂಗಮದೇವಾ.