ವೇದದಂತುಟಲ್ಲ ಶಾಸ್ತ್ರದಂತುಟಲ್ಲ. ಗೀತಮಾತಿನಂತುಟಲ್ಲ ಕೇಳಯ್ಯಾ. ಮಾತಿನ ಮಾತಿನ ಕವುಳುಗೋಲ ಶ್ರವದಲ್ಲಿ ಸತ್ತವರೊಳರೆ ಅಯ್ಯಾ ದಿಟದಲಗಿನ ಕಾಳೆಗವಿತ್ತಲಿದ್ದುದೆ ಕೂಡಲಸಂಗನ ಶರಣರು ಬಂದಲ್ಲಿ. 209