ಷಡೂರ್ಮಿಯಿಲ್ಲ ಷಡ್ವರ್ಗವಿಲ್ಲ ನಾನೆಂಬುದಿಲ್ಲ ನೀನೆಂಬುದಿಲ್ಲ. ಏನೆಂಬುದೇನೂ ಇಲ್ಲದಿಹುದೆ ಚಿದಹಂಕಾರದ ಲಿಂಗೈಕ್ಯವಯ್ಯಾ ಗುಹೇಶ್ವರಾ.