ವಿಷಯಕ್ಕೆ ಹೋಗು

ಸೃಷ್ಟಿಯ ಮೇಲಣ ಕಣಿಯ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸೃಷ್ಟಿಯ ಮೇಲಣ ಕಣಿಯ ತಂದು
ಅಷ್ಟತನುವಿನ ಕೈಯಲ್ಲಿ ಕೊಟ್ಟು
ಕಟ್ಟಿ ಪೂಜೆಯ ಮಾಡಬೇಕೆಂಬರಯ್ಯಾ. ಅದೆಂತೆಂದಡೆ:ಭೂಮಿಗೆ ಹುಟ್ಟಿ ಶಿಲೆಯಾದ
ಕಲ್ಲುಕುಟಿಕನ ಕೈಯಲ್ಲಿ ರೂಪಾದ
ಗುರುವಿನ ಕೈಯಲ್ಲಿ ಮೂರ್ತಿಯಾದ. ಇಂತೀ ಮೂವರಿಗೆ ಹುಟ್ಟಿದ ಸೂಳೆಯ ಮಗನ ನಾನೇನೆಂದು ಪೂಜೆಯ ಮಾಡಲಿ ? ಅದು ಬಿದ್ದಿತ್ತೆಂದು ಸಮಾಧಿಯ ಹೊಕ್ಕಿಹೆನೆಂಬವನು
ಅಸ್ತ್ರ ಸಮಾಧಿ ಜಲಾಂತರ ವನಾಂತರ ದಿಗಂತರದಲ್ಲಿ ಸತ್ತಡೆ ಕುಂಭಿನಿಪಾತಕ ನಾಯಕನರಕ. ಕೈಯ ಲಿಂಗ ಹೋದಡೆ ಮನದ ಲಿಂಗ ಹೋದುದೆ ?_ಎಂದು ಎತ್ತಿಕೊಂಡು
ಅಷ್ಟವಿಧಾರ್ಚನೆ ಷೋಡಶೋಪಚಾರ ಮಾಡುವುದೆ ವ್ರತವು. ಇದ ಕಟ್ಟುವ ಭೇದವ
ಮುಟ್ಟುವ ಪಥವ ಚೆನ್ನಬಸವಣ್ಣನೊಬ್ಬನೆ ಬಲ್ಲನಲ್ಲದೆ ಮಿಕ್ಕ ಅಭ್ಯಾಸಕ್ಕೆ ಅಗ್ಘವಣಿಯ ಕೊಟ್ಟು ಪರವನೆಯ್ದಿದೆನೆಂಬ ಲಜ್ಜಗೇಡಿಗಳನೇನೆಂಬೆ ಗುಹೇಶ್ವರಾ