ಸೋಮವಾರ ಮಂಗಳವಾರ ಹುಣ್ಣಿಮೆ

ವಿಕಿಸೋರ್ಸ್ದಿಂದ



Pages   (key to Page Status)   


ಸೋಮವಾರ ಮಂಗಳವಾರ ಹುಣ್ಣಿಮೆ ಸಂಕ್ರಾಂತಿ ಶಿವರಾತ್ರಿ_ ಮೊದಲಾದ ತಿಥಿವಾರಂಗಳಲ್ಲಿ ಏಕಭುಕ್ತೋಪವಾಸಿಯಾಗಿ ಆ ಕ್ಷುದ್ರ ತಿಥಿಗಳಲ್ಲಿ
ಮಾಡಿದ ನೀಚೋಚ್ಛಿಷ್ಟವಂ ತಂದು ತನ್ನ ಕರಸ್ಥಲದ ಇಷ್ಟಲಿಂಗಕ್ಕೆ ಕೊಟ್ಟು ಕೊಂಡು ಭಕ್ತನೆನಿಸಿಕೊಂಡೆನೆಂಬ ಅನಾಚಾರಿಯ ಮುಖವ ನೋಡಲಾಗದು ನೋಡಲಾಗದು. ಅದೇನು ಕಾರಣವೆಂದಡೆ: ದಿನ ಶ್ರೇಷ್ಠವೊ ? ಲಿಂಗ ಶ್ರೇಷ್ಠವೊ ? ದಿನ ಶ್ರೇಷ್ಠವೆಂದು ಮಾಡುವ ದುರಾಚಾರಿಯ ಮುಖವ ನೋಡಲಾಗದು
ನೋಡಲಾಗದು
ಅದೆಂತೆಂದಡೆ: ಆವ ದಿನ ಶ್ರೇಷ್ಠವೆಂದು ದಿನವೆ ದೈವವೆಂದು ಮಾಡುವನಾಗಿ
ಅವನು ದಿನದ ಭಕ್ತನು. ಅವನಂತಲ್ಲ ಕೇಳಿರಣ್ಣ ಸದ್ಭಕ್ತನು_ಲಿಂಗವೆ ಘನವೆಂದು ಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ದೈವವೆಂದು ಮಾಡುವನಾಗಿ ಆತ ಲಿಂಗಭಕ್ತನು. ಈ ಲಿಂಗಭಕ್ತಂಗೆ ದಿನದ ಭಕ್ತನ ತಂದು ಸರಿಯೆಂದು ಹೋಲಿಸಿ ನುಡಿವಂಗೆ
ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ
ಅವ ಭಕ್ತನಲ್ಲ
ಅವಂಗೆ ಅಘೋರನರಕ. ಭವಿದಿನ_ತಿಥಿ_ವಾರಂಗಳಲ್ಲಿ ಕೂರ್ತುಮಾಡುವಾತ ಭಕ್ತನಲ್ಲ. ಅಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವಾತ ಜಂಗಮವಲ್ಲ. ಈ ಉಭಯರನು ಕೂಡಲಚೆನ್ನಸಂಗಯ್ಯ ಕುಂಭೀಪಾತಕ ನಾಯಕನರಕದಲ್ಲಿಕ್ಕುವನು