ವಿಷಯಕ್ಕೆ ಹೋಗು

ಹರನಿತ್ತಾಗ್ರಹ ನಿಗ್ರಹದ ಬೆಸನ,

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಹರನಿತ್ತಾಗ್ರಹ ನಿಗ್ರಹದ ಬೆಸನ
ಗುರುನಿರೂಪವೆಂದು ಕೈಕೊಂಡು
ಕರುಣಿ ಬಸವಣ್ಣ ಕೈಲಾಸದಿಂದ ಗುರುಲಿಂಗಜಂಗಮಕ್ಕೆ ಭಕ್ತಿಯ ಮಾಡಬೇಕೆಂದು ಏಳುನೂರೆಪ್ಪತ್ತು ಅಮರಗಣಂಗಳು ಸಹಿತ ಮತ್ರ್ಯಲೋಕಕ್ಕೆ ಬಂದನಯ್ಯಾ. ಶಿವಸಮಯಕ್ಕಾಧಾರವಾದನಯ್ಯಾ
ಬಸವಣ್ಣನು. ಜಡರುಗಳ ಮನದ ಕತ್ತಲೆಯ ಕಳೆಯಲೆಂದು ಕಟ್ಟಿತ್ತು ಕಲ್ಯಾಣದಲ್ಲಿ ಮಹಾಮಠವು. ಪರಮನಟ್ಟಿದ ಓಲೆ ಬಂದಿಳಿಯಿತ್ತು
ಬಿಜ್ಜಳನ ಸಿಂಹಾಸನದ ಮುಂದೆ. ಅದತಂದು ಓದಿದಡೆ ಸೃಷ್ಟಿಯ ಸೇನಬೋವರಿಗೆ ತಿಳಿಯದು ಛಪ್ಪನ್ನ ದೇಶದ ಭಾಷೆಯ ಲಿಪಿ ಮುನ್ನವಲ್ಲ. ಇದನೋದಿದವರಿಗೆ ಆನೆ ಸೇನೆ ಕುದುರೆ ಭಂಡಾರ ಅರವತ್ತಾರು ಕರಣಿಕರಿಗೆ ಮುಖ್ಯನ ಮಾಡುವೆನೆಂದು ಬಿಜ್ಜಳ ಭಾಷೆಯ ಕೊಡುತ್ತಿರಲು
ಹರನಿರೂಪವ ಶಿರದ ಮೇಲಿಟ್ಟು ಶಿವಶರಣೆಂದು ಬಸವಣ್ಣನೋದಿ ಮೆಟ್ಟಿ ತೆಗೆಸಿದನಯ್ಯಾ ಅರವತ್ತಾರು ಕೋಟಿ ವಸ್ತುವ ಅರಮನೆಗೆ. ರಾಜ್ಯಕ್ಕೆ ಅರಮನೆಗೆ [ಶಿರಃ ಪ್ರಧಾನ]ನಾಗಿ ಹರಗಣಂಗಳಿಗೆ ಗತಿಮತಿ ಚೈತನ್ಯನಾಗಿ ಕೂಡಲಚೆನ್ನಸಂಗಯ್ಯನಲ್ಲಿ ಅಂಡಜದೊಳಗಿದ್ದು ಶಿವನ ಭಂಡಾರಿಯಾದನಯ್ಯಾ ಎನ್ನ ತಂದೆ ಪೂರ್ವಾಚಾರಿ ಸಂಗನಬಸವಣ್ಣನು.