ಹರಿನಯನವ ಚರಣಕಮಲದಲ್ಲಿ ಧರಿಸಿ ಶಿರಮಕುಟದಲ್ಲಿ ಹರಿವ ಗಂಗೆಯ ತಾಳಿ ಅಸುರರ ಶಿರಗಳ ಕೊರಳ ಹಾರವ ಮಾಡಿ ಅಜಶಿರಪಾತ್ರೆಯ ಕರಮಧ್ಯದೊಳಗಿರಿಸಿ ಗಜಚರ್ಮಾಂಬರ ಭುಜಗಭೂಷಣನೆನಿಸಿ ತ್ರಿಜಗವ ಪಾಲಿಸುತ್ತ ಬಂದಿರಯ್ಯ ಎನ್ನ ಕರಸ್ಥಲಕ್ಕೆ ಅಖಂಡೇಶ್ವರಾ.