ಹಸಿವರತಲ್ಲದೆ ಪ್ರಸಾದಿವೇದಿಯಲ್ಲ ತೃಷೆಯರತಲ್ಲದೆ ಪಾದೋದಕವೇದಿಯಲ್ಲ ನಿದ್ರೆಯರತಲ್ಲದೆ ಭವವಿರಹಿತನಲ್ಲ. ಅನಲ ಪವನ (ಗುಣವರತಲ್ಲದೆ) ಜನನ ಮರಣ ರಹಿತನಲ್ಲಯ್ಯ. ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಲಿಂಗೈಕ್ಯವೆಲ್ಲರಿಗೆಲ್ಲಿಯದು ?