ಹುಟ್ಟಿಸುವಾತ ಬ್ರಹ್ಮನೆಂಬರು ರಕ್ಷಿಸುವಾತ ವಿಷ್ಣುವೆಂಬರು ನೋಡಾ ಬ್ರಹ್ಮ ತನ್ನ ಶಿರವನೇತಕ್ಕೆ ಹುಟ್ಟಿಸಲಾರ ವಿಷ್ಣು ತನ್ನ ಮಗನನೇತಕ್ಕೆ ರಕ್ಷಿಸಲಾರ ದುಷ್ಟನಿಗ್ರಹ ಶಿಷ್ಟಪ್ರತಿಪಾಲಕ ನಮ್ಮ ಕೂಡಲಸಂಗಮದೇವ.