ಹೆಣ್ಣಿನ ರೂಪು ಕಣ್ಣಿಗೆ ರಮ್ಯವಾಗಿ ತೋರುವದಿದು ಕರಣಂಗಳ ಗುಣ ಕಾಣಿರಣ್ಣ. ಕರಣದ ಕತ್ತಲೆಯ ಲಿಂಗಬೆಳಗನುಟ್ಟು ಕಳೆದು ಮುಕ್ಕಣ್ಣನೆ ಕಣ್ಣಾಗಿಪ್ಪ ಶರಣ ಬಸವಣ್ಣನ ಪಾದವ ತೋರಿಸಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.