ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು ನಿಂದಲ್ಲಿ ನಿಲಲೀಯದೆನ್ನ ಮನವು ಹೊಂದಿದಲ್ಲಿ ಹೊಂದಲೀಯದೆನ್ನ ಮನವು ಕೂಡಲಸಂಗಮದೇವಾ ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು ನಿಮ್ಮ ಧರ್ಮ. 32