ಕೋಣನ ಹೇರಿಂಗೆ ಕುನ್ನಿ ಬಸುಕುತ್ತಬಡುವಂತೆ ತಾವೂ ನಂಬರು ನಂಬುವರನೂ ನಂಬಲೀಯರು ತಾವೂ ಮಾಡರು ಮಾಡುವರನೂ ಮಾಡಲೀಯರು. ಮಾಡುವ ಭಕ್ತರ ಕಂಡು ಸೈರಿಸಲಾರದವರ ಕೂಗಿಡೆ ಕೂಗಿಡೆ ನರಕದಲ್ಲಿಕ್ಕುವ ಕೂಡಲಸಂಗಮದೇವ.