Pages(key to [[Help:Page Status{{!}}Page Status]])
ಹೊಲೆಯ ಮಾದಿಗ ಭಕ್ತನಾದಡೆ ಆತನ ಮನೆಯ ಸೊಣಗಂಗೆ ಪಂಚಮಹಾವಾದ್ಯದಲಿ ಸನ್ಮಾನವ ಮಾಡೆನೆ ನೆಲನನುಗ್ಘಡಿಸಿ ಉಘೇ ಚಾಂಗು ಭಲಾ ಎಂದು ! ಕುಲಕಧಿಕ ಹಾರುವಂಗೆ ಸಿದ್ಧಿಗೆ ಎಯಿಸಲೆ ! ನಿಮ್ಮ ಶರಣರ ಮಹಿಮೆ ಘನಕ್ಕೆ ಘನ. ಎಲೆ ಎಲೆ ಕೂಡಲಸಂಗಮದೇವಾ ನಿಮ್ಮ ನಂಬದವ ಹೊಲೆಯ.