ಅಳಿಯ ಬಳಿಯೆ ಸುಳಿವನಲ್ಲ ಪ್ರಳಯವಿಲ್ಲದ ವಿಜಯನು. ಕುಳಾಕುಳದ ಆತ್ಮನ ಅಂಗದ ಸಂಗಿಯಲ್ಲ. ಸುಳುಹಿನೊಳಗಣ ಸೂಕ್ಷ್ಮವ ತಿಳಿದು ನೋಡುವಡೆ ಅಣಿಮಾದಿ ಗುಣರಹಿತನು ಅಕಲ್ಪಿತಮಹಿಮನನೇನೆಂಬೆ ? ನೆಳಲ ಕಳವಳದ ಬಳಿಯ ಭಾವರೂಪನಲ್ಲ ! ಬೆಳಗಿನೊಳಗಣ ಬೆಳಗು ಗುಹೇಶ್ವರಾ ನಿಮ್ಮ ಶರಣನ ನಿಲವು !