ಅರೆಯ ಮೇಲಣ ಹುಲ್ಲೆಗೆ ಕೆಂಗರಿಯ ಬಾಣವ ತೊಟ್ಟವನೆ (ತೊಟ್ಟಡೆ ?) ತಪ್ಪದೆ ತಾಗಿತ್ತಲ್ಲಾ ! ಅದು ಒಂದೆ ಬಾಣದಲ್ಲಿ ಅಳಿಯಿತ್ತಲ್ಲಾ ! ನಾರಿ ಹರಿಯಿತ್ತು ಬಿಲ್ಲು ಮುರಿಯಿತ್ತು. ಹುಲ್ಲೆ ಎತ್ತ ಹೋಯಿತ್ತು ಗುಹೇಶ್ವರಾ?