ಸ್ವಸ್ಥ ಪದ್ಮಾಸನದಲ್ಲಿ ಕುಳ್ಳಿರ್ದು ನಿಟ್ಟೆಲುವ ಮುರಿದು ನಿಷೆ*ಯಿಂದ ಹಿಂದಣ ಬಟ್ಟೆಯ ತೆಗೆದು
ಅಮೃತವ ಉಂಡಿಹೆನೆಂಬವರು ಕೆಟ್ಟ ಕೇಡಿಂಗೆ ಕಡೆಯಿಲ್ಲ. `ಅತ್ಯತಿಷ*ದ್ದಶಾಂಗುಲ' ಎಂಬ ಶ್ರುತಿಯ ನೋಡಲು ಮುಟ್ಟಿ ನೆಲೆಗೊಳಿಸುವಠಾವುಂಟೆ ? ಸ್ಥಾನಮಾನವೆಂಬ ಮಾತಿಂಗೆ ದೂರವಾದ ಘನವ ಬ್ರಹ್ಮರಂಧ್ರದಲ್ಲಿ ಕಂಡಿಹೆನೆಂದಡೆ ಕಾಣಬಹುದೆ ? ನಮ್ಮ ಗುಹೇಶ್ವರಲಿಂಗವು ಕಲ್ಪಿತಕ್ಕೆ ದೂರ ಕೇಳಾ ಸಿದ್ಧರಾಮಯ್ಯಾ.