ಹೋ ಹೋ ಗುರುವೆ,

ವಿಕಿಸೋರ್ಸ್ದಿಂದ



Pages   (key to Page Status)   


ಹೋ ಹೋ ಗುರುವೆ
ನಿಮ್ಮ ಕರಕಮಲದಲ್ಲಿ ಉದಯಿಸಿ ಅಂಗದ ಮೇಲೆ ಲಿಂಗವ ಧರಿಸಿ
ಲಿಂಗದಲ್ಲಿ ಆಗಾಗಿ ಪ್ರಾಣಲಿಂಗ ಲಿಂಗಪ್ರಾಣ ಎಂಬುದ ನಾನು ಕಂಡೆನು. ನಿಮಗಾನು ತೋರಲು ಸಮರ್ಥನೆ ? ಆಚಾರ ಅಂಗದ ಮೇಲೆ ನೆಲೆಗೊಂಡು
ಇಷ್ಟಲಿಂಗದಲ್ಲಿ ದೃಷ್ಟಿನಟ್ಟು ಭಾವಸಂಪನ್ನವಾಗಿಪ್ಪ ನಿಮ್ಮ ಘನವ ನಾನೆತ್ತ ಬಲ್ಲೆನಯ್ಯಾ ? ಅನುಭಾವ ಅಂತರಂಗದಲ್ಲಿ ಎಡೆಗೊಂಡು
ಪ್ರಾಣಲಿಂಗದಲ್ಲಿ ನಿಕ್ಷೇಪವಾಗಿ
ನಿಜಲಿಂಗೈಕ್ಯನಾಗಿಪ್ಪ ನಿಮ್ಮ ಘನವ ನಾನೆತ್ತ ಬಲ್ಲೆನಯ್ಯಾ ? ಜ್ಞಾನಸಮಾಧಿಯೊಳಗೆ ಬಯಕೆಯಡಗಿ ಪರಿಣಾಮಲಿಂಗದಲ್ಲಿ ಮನಸ್ಸು ಲಯವಾಗಿ ನಿಜಲಿಂಗತೃಪ್ತರಾಗಿಪ್ಪಿರಿ ನೀವು; ನಿಮ್ಮ ಘನವ ನಾನೆತ್ತ ಬಲ್ಲೆನಯ್ಯಾ ! ಅಂಗದ ಮೇಲೆ ಲಿಂಗವುಳ್ಳುದೆಲ್ಲವು ಸಂಗಮನಾಥನೆಂಬಲ್ಲಿ ಜಂಗಮಲಿಂಗ ಪ್ರಾಣಿಯಾಗಿಪ್ಪಿರಿ ನೀವು
ನಿಮ್ಮ ಘನವ ನಾನೆತ್ತ ಬಲ್ಲೆನಯ್ಯಾ ಲಿಂಗಕ್ಕೆ ಬಂದ ಪದಾರ್ಥವನಲ್ಲದೆ ಕೊಳ್ಳೆನೆಂದು ಮನ ಮೀಸಲು
ತನುಮೀಸಲು ಮಾಡಿ
ಸರ್ವಾಂಗಸುಖವೆಲ್ಲವನು ಪ್ರಾಣಲಿಂಗದಲ್ಲಿ ಅರ್ಪಿಸಿ . ನಿರಾಭಾರಿಯಾಗಿ
ಪ್ರಸಾದಲಿಂಗಪ್ರಾಣಿಯಾಗಿಪ್ಪಿರಿ ನೀವು ನಿಮ್ಮ ಘನವ ನಾನೆತ್ತ ಬಲ್ಲೆನಯ್ಯಾ ! ಅನಾದಿ ಶಿವಂಗೆ ಆಧಾರವಿಲ್ಲೆಂದು
ಅಖಂಡಿತನ ನಿಮ್ಮ ರೋಮದ ಕೊನೆಯಲ್ಲಿ ಧರಿಸಿ ಮಹಾಲಿಂಗಪ್ರಾಣಿಯಾಗಿಪ್ಪಿರಿ ನೀವು
ನಿಮ್ಮ ಘನವ ನಾನೆತ್ತ ಬಲ್ಲೆನಯ್ಯಾ ! ಕೂಡಲಚೆನ್ನಸಂಗಮದೇವ ಸಾಕ್ಷಿಯಾಗಿ
ನಿಮ್ಮ ಪ್ರಾಣಲಿಂಗಸಂಬಂಧದ ಸೆರಗು ಸೋಂಕಿನ ಒಕ್ಕುಮಿಕ್ಕ ಪ್ರಸಾದಿ ನಾನು ಕಾಣಾ ಸಂಗನಬಸವಣ್ಣ.