ವಿಷಯಕ್ಕೆ ಹೋಗು

ಅಷ್ಟದಳಕಮಲವ ಮೆಟ್ಟಿ ಚರಿಸುವ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಷ್ಟದಳಕಮಲವ ಮೆಟ್ಟಿ ಚರಿಸುವ ಹಂಸನ ಭೇದವ ಹೇಳಿಹೆನು: ಪೂರ್ವದಳಕೇರಲು ಗುಣಿಯಾಗಿಹನು. ಅಗ್ನಿದಳಕೇರಲು ಕ್ಷುಧೆಯಾಗಿಹನು. ದಕ್ಷಿಣದಳಕೇರಲು ಕ್ರೋದ್ಥಿಯಾಗಿಹನು. ನೈಋತ್ಯದಳಕೇರಲು ಅಸತ್ಯನಾಗಿಹನು. ವರುಣದಳಕೇರಲು ನಿದ್ರೆಗೆಯ್ವುತಿಹನು. ವಾಯುದಳಕೇರಲು ಸಂಚಲನಾಗಿಹನು. ಉತ್ತರದಳಕೇರಲು ಧರ್ಮಿಯಾಗಿಹನು. ಈಶಾನ್ಯದಳಕೇರಲು ಕಾಮಾತುರನಾಗಿಹನು. ಈ ಅಷ್ಟದಳಮಂಟಪದ ಮೇಲೆ ಹರಿದಾಡುವ ಹಂಸನ ಕುಳನ ತೊಲಗಿಸುವ ಕ್ರಮವೆಂತುಟಯ್ಯಾಯೆಂದೊಡೆ: ಅಷ್ಟದಳಮಂಟಪದ ಅಷ್ಟಕೋಣೆಗಳೊಳಗೆ ಅಷ್ಟ ಲಿಂಗಕಳೆಯ ಪ್ರತಿಷ್ಠಿಸಿ ಹಂಸನ ನಟ್ಟ ನಡುಮಧ್ಯದಲ್ಲಿ ತಂದು ನಿಲಿಸಲು ಮುಕ್ತಿಮೋಕ್ಷವನೆಯ್ದಿ ಪರವಶನಾಗಿಪ್ಪನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.