ಮೆಟ್ಟಿಲಿಲ್ಲದ ಭೂಮಿಯಲ್ಲಿ ಹುಟ್ಟಿಲಿಲ್ಲದ ಹೆಮ್ಮರ ಹುಟ್ಟಿತ್ತು ನೋಡಾ. ಮೆಟ್ಟಿ ಹತ್ತೆಹೆನೆಂದರೆ ಕೊಂಬಿಲ್ಲ; ಮುಟ್ಟಿ ಹಿಡಿದಿಹೆನೆಂದರೆ ಮೂರ್ತಿಯಲ್ಲ. ಅದರಲ್ಲಿ ಕಟ್ಟಣೆಗೆಯ್ದದ ಹಣ್ಣು ರಸತುಂಬಿ
ತೊಟ್ಟು ಬಿಡದು ನೋಡಾ. ತೊಟ್ಟ ಮುಟ್ಟದೆ ಕಟ್ಟಣೆಗೆಯ್ದದ ಹಣ್ಣು ಮುಟ್ಟಿ ಸವಿಯಬಲ್ಲಾತನ ಹುಟ್ಟರತಾತನೆಂಬೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.