ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೯೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಅತಿಮಾನುಷ ಕಥೆಗಳು
೬೯

ಮುಸ್ತಾದ ಇದ್ದೀನಿ" ಎಂದಳು ಸೊಸಿ.

"ಪಟೇಲನ ಮನೀಗಿ ಶೋಭಾನ ಆದ ಹುಡುಗಿ ಹೋಗಬೇಕೆನ್ನುವುದು ನಮ್ಮೂರ ಪದ್ಧತಿ ಆದ. ಅದಕ್ಕ ಹೇಂಗ ಮಾಡಬೇಕೇನ್ನೂದು ತಿಪಲ ಬಿದ್ದಾದ"ಎಂದಾಳು ಅತ್ತಿ.

ಸೊಸಿ ಚಿಂತಿ ಮಾಡಲ್ದೆ ಆರತಿ ಹಿಡಕೊಂಡು ಶೋಭಾನ ಆದ ಸೀರಿ ಉಟಕೊಂಡು ಹೋದಳು. ಪಟೇಲ ಬಂಕಿನೊಳಗೆ ನಿಂತಿದ್ದ. ಪಡಸಾಲ್ಯಾಗ ಹೋಗಿ ನಿಂತು ಸೊಸಿ ಕೇಳ್ತಾಳ—"ಯಾಕರಿ ಎಪ್ಪಾ, ನಮಗ್ಯಾಕ ಕರೆಸೀರಿ?"

"ನನಗೆ ಅಪ್ಪ ಅಂತ ಕರೆದಳು. ನಾ ಈಗ ಇವಳಿಗೆ ಅಪ್ಪ ಆದೆ. ಇನ್ನ ಬ್ಯಾರೆ ಇಚಾರನೇ ಮಾಡೂದು ಬ್ಯಾಡ" ಎಂದು ಇಚಾರಿಸಿ—"ಬಡವರಿದ್ದೀರಿ. ಸೀರಿ ಉಡಿಸಿ ಕಳಿಸಬೇಕೆಂದು ಮಾಡಿದ್ದೆ. ಸೀರಿ ಉಡಿಸಿ ಉಡಿಯಕ್ಕಿ ಹೊಂಹ್ಹು ಕಳಿಸಿಕೊಡುತೀನಿ ಮಗಾ" ಎಂದ.

"ಎಪ್ಪಾ ನಾ ಒಂದ ಮಾತ ಹೇಳತೀನಿ" ಅಂದಳು ಸೊಸಿ.

"ಅದೇನು ಮಾತವ್ಹ ಖುಲಾಸ ಹೇಳಿಬಿಡು" ಎಂದು ಪಟೇಲ ಹೇಳಿದ.

"ಹೇಂಗೂ ದೀಪಾವಳಿ ಹೊಂಟಾದ. ಒಬ್ಬರೂ ಮನ್ಯಾಗ ತುಂಬಿದ ಕೊಡ ಇಕ್ಕಬಾರದು. ದೀಪ ಇಡಬಾರದು. ನೀ ಹೀಂಗ ಡಂಗುರ ಸಾರಿದರ ಜನ ನೀ ಹೇಳಿದಂಗ ಕೇಳತಾದ.?

ಪಟೇಲ ಅದರ್ಃಂಗ ಡಂಗುರ ಸಾರಿಸಿದ. ಸೊಸಿಗಿ ಉಡಿಯಕ್ಕಿ ಇಕ್ಕಿ ಕಳಿಸಿದ. ನಾಲ್ಕೆ ಭದ ದಿನದಾಗ ದೀವಳಿಗೆ ಬಂತು. ದೀಪ ಇಕ್ಕಬೇಡ ಅಂತ ಪಟೇಲ ಹೇಳಿದಂತೆ ಊರವರು ಬಿಟ್ಟರ ಸೊಸೆ ಮನೀತುಂಬಾ—ಮಾಡತುಂಬಾ ದೀಪ ಹಚ್ಚಿಟ್ಟಳು. ಒಲಿಯೊಳಗೆ ಬೆಂಕಿಮಾಡಿಟ್ಟಳು. ಲಕ್ಷ್ಮೀತಾಯಿ ಊರತುಂಬಾ ತಿರುತಿರುಗಿ ಬಂದಳು. ಊರೆಲ್ಲ ಕತ್ತಲೆ ಕಂಕಾಳ ಆಗಿತ್ತು. ಸಣ್ಣ ಪೋರನ ಮನಿಯಾಗ ದೀಪ ಇರುವದು ಕಂಡು ಅಲ್ಲೇ ಬಂದಳು. "ತಟ್ಟೀ ತೆರೆ" ಅಂತ ಲಕ್ಷ್ಮೀತಾಯಿ ಅಂದಳು.

"ನೀನು ಯಾರು ಇದ್ದೀ" ಎಂದು ಸೊಸಿ ಕೇಳಿದಳು. "ನಾ ಲಕ್ಷ್ಮೀ ಇದ್ದೀನಿ. ಜಲ್ದೀ ತಟ್ಟೀ ತಗಿ ಮಗಾ" ಎಂದಳು. "ಲಕ್ಷ್ಮೀ ಇದ್ದರ ಚೆಂದ ಆಯ್ತು. ಯಾಕ ಹೊಂಟೀದಿ ? ಇರಪಲೆ ಇದ್ದರ ಮಾತ್ರ ತಟ್ಟೀ ತಗೀತೀನಿ" ಎಂದಳು. "ಊರವರಲ್ಲಿ ದೀಪ ಇಲ್ಲ. ಅದಕ್ಕ ನಿನ್ನಲ್ಲಿ ಬಂದೀನು.” "ನೀನು ಎಂದೆಂದಿಗೂ ಹೋಗದಿದ್ದರ ತಟ್ಟೀತಗೀತೀನು."