ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
viii
ಪ್ರಕಾಶಕರ ಮಾತು

ಕರ್ನಾಟಕದ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ 'ವಿಶ್ವ ಕನ್ನಡ ಸಮ್ಮೇಳನ'ದ ಅಂಗವಾಗಿ ಸುಮಾರು ನೂರು ಪುಸ್ತಕಗಳನ್ನು ಪ್ರಕಟಿಸಲು ಉದ್ದೇಶಿಸಿರುತ್ತದೆ. ಈ ಯೋಜನೆಯಡಿ ಹಳಗನ್ನಡ, ನಡುಗನ್ನಡ ಮತ್ತು ಹೊಸಗನ್ನಡ ಈ ಮೂರೂ ಕಾಲಘಟ್ಟಗಳಲ್ಲಿ ರಚನೆಗೊಂಡ, ಕನ್ನಡದಲ್ಲಿ ಮಹತ್ವದ ಕೃತಿಗಳೆಂದು ಪರಿಗಣಿತವಾಗಿರುವ ಪುಸ್ತಕಗಳನ್ನು ಸರ್ಕಾರವು ನೇಮಿಸಿರುವ ಆಯ್ಕೆ ಸಮಿತಿಯು ಮರುಮುದ್ರಣಕ್ಕೆ ಆಯ್ಕೆ ಮಾಡಿರುತ್ತದೆ. ಈ ಸಾಹಿತ್ಯ ಮಾಲೆಯಲ್ಲಿ ಈಗಾಗಲೇ ಇಲಾಖೆಯು ಸಮಗ್ರ ಸಾಹಿತ್ಯ ಪ್ರಕಟಣೆಯಡಿ ಪ್ರಕಟಿಸಿರುವ ಲೇಖಕರ ಕೃತಿಗಳನ್ನು ಪರಿಗಣಿಸಿರುವುದಿಲ್ಲ.

ಕನ್ನಡದ ಮೇರುಕೃತಿಗಳ ಮರುಮುದ್ರಣಕ್ಕೆ ಪುಸ್ತಕಗಳನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿಯ ಅಧ್ಯಕ್ಷರಾದ ಪ್ರೊ. ಎಲ್.ಎಸ್. ಶೇಷಗಿರಿ ರಾವ್ ರವರಿಗೆ ಹಾಗು ಸಮಿತಿಯ ಸದಸ್ಯರುಗಳಾದ ಡಾ. ಚಂದ್ರಶೇಖರ ಕಂಬಾರ, ಡಾ. ಹಂಪ ನಾಗರಾಜಯ್ಯ, ಡಾ. ಎಂ.ಎಂ.ಕಲಬುರ್ಗಿ, ಡಾ. ದೊಡ್ಡರಂಗೇಗೌಡ, ಡಾ. ಎಚ್.ಜೆ. ಲೆಕ್ಕಪ್ಪಗೌಡ, ಡಾ. ಅರವಿಂದ ಮಾಲಗತ್ತಿ, ಡಾ. ಎನ್.ಎಸ್. ಲಕ್ಷ್ಮೀನಾರಯಣ ಭಟ್ಟ, ಡಾ. ಪಿ.ಎಸ್. ಶಂಕರ್, ಶ್ರೀಮತಿ ಸಾರಾ ಅಬೂಬಕ್ಕರ್, ಡಾ. ಪ್ರಧಾನ್ ಗುರುದತ್ತ ಇವರುಗಳಿಗೆ ನನ್ನ ಕೃತಜ್ಞತೆಗಳು. ಈ ಯೋಜನೆಯಡಿ ಮರುಮುದ್ರಣಕ್ಕೆ ಆಯ್ಕೆಯಾಗಿರುವ ಪುಸ್ತಕಗಳ ಮುದ್ರಣಕ್ಕೆ ಅನುಮತಿ ನೀಡಿದ ಎಲ್ಲ ಲೇಖಕರಿಗೂ, ಹಕ್ಕುದಾರರಿಗೂ ಮತ್ತು ಕರಡಚ್ಚು ತಿದ್ದಿದವರಿಗೂ ನನ್ನ ವಂದನೆಗಳು.

ಸದರಿ ಪ್ರಕಟಣಾ ಯೋಜನೆಯ ಪುಸ್ತಕಗಳನ್ನು ಹೊರತರಲು ಸಹಕರಿಸಿದ ಶ್ರೀ ಎಚ್. ಶಂಕರಪ್ಪ, ಜಂಟಿ ನಿರ್ದೇಶಕರು, (ಸು.ಕ), ಶ್ರೀಮತಿ ವೈ.ಎಸ್.ವಿಜಯಲಕ್ಷ್ಮಿ, ಸಹಾಯಕ ನಿರ್ದೇಶಕರು ಹಾಗೂ ಪ್ರಕಟಣಾ ಶಾಖೆಯ ಸಿಬ್ಬಂದಿಗೆ ನನ್ನ ನೆನಕೆಗಳು. ವಿಶ್ವ ಕನ್ನಡ ಸಮ್ಮೇಳನದ ಲಾಂಛನವನ್ನು ಸಿದ್ಧಪಡಿಸಿಕೊಟ್ಟ ಹಿರಿಯಕಲಾವಿದರಾದ ಶ್ರೀ ಸಿ. ಚಂದ್ರಶೇಖರ ಅವರಿಗೂ ನನ್ನ ನೆನಕಗಳು ಹಾಗೂ ಈ ಪುಸ್ತಕಗಳನ್ನು ಸುಂದರವಾಗಿ ಮುದ್ರಿಸಿಕೊಟ್ಟಿರುವ ಮಯೂರ ಪ್ರಿಂಟ್ ಆಡ್ಸ್ ನ ಮಾಲೀಕರಾದ