ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೨೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಜನಪದ ಕಥೆಗಳು

ಮೈನಾವತಿ ಊರಿಗೆ ಹೊಗುವಾಗ ಚೀಟಿ ಆವಳ ಕೈಗೆ ಸಿಗುತ್ತದೆ. ತನ್ನಾ ಮನೆಬಾಗಿಲಿಗೆ ಅವಳೋಂದು ಚೀಟೀ ಅಂಟಿಸಿ ಆತ್ತೆ ಮಾವರ ಮನೆಗೆ ಹೋದಳು

"ನನ್ನೂರಿಗೆ ನೀವು ಬರಬೇಕು" ಎಂದು ಆಕೆ ಚೀಟೀಯಲ್ಲೆ ಬರೆದ ಪ್ರಕಾರ, ರಾಜನ ಮಗ ಹಾಗು ಪ್ರಧಾನಿಯ ಮಗ ಮೈನಾವತಿಯ ಗಂಡನೂರಿಗೆ ಹೊಗಿ ಅಲ್ಲಿ ಹೂಗಾರ ಮುದುಕಿಯ ಮನೆಗೆ ಹೊಗುತ್ತಾರೆ. ಅಲ್ಲಿ ರಾತ್ರಿ ಮಲಗಲು ವ್ಯವಸ್ಥೆ ಮಾಡುತ್ತಾರೆ. ಅಕ್ಕಿತಂದುಕೊಟ್ಟರೆ ಬೋನ ಮಾಡಿಕೊಡುವೆ ಎಂದಳು ಆ ಮುದುಕಿ. ಅಕ್ಕಿ ತರುವುದಕ್ಕೆ ಬುಟ್ಟಿ ಕೇಳಿದರೆ ಆ ಮುದುಕಿ ನೇರವಾಗಿ ಮೈನಾವತಿಯ ಮನೆಗೆ ಹೊಗಿ ಒಂದು ಬುಟ್ಟಿ ಬೇಡುತ್ತಾಳೆ. ಮೈನಾವತಿ ಬುಟ್ಟಿಗೆ ಜಾಜಾ ಹಚ್ಚೀಕೊಡುತ್ತಾಳೆ. ಅಕ್ಕಿ ಕೊಳ್ಳವುದಕ್ಕೆ ರಾಜನ ಮಗನು ಅಂಗಡಿಗೆ ಹೋದಾಗ ಆತನಿಗೆ ಒಂದು ಚೀಟಿ ಸಿಗುತ್ತದೆ -

"ಈ ಹೊತ್ತಿನ ದಿವಸ ಶಂಭೂಮಹಾದೇವನ ಗುಡಿಗೆ ಬರುತ್ತೇನೆ. ನೀವು ಅಲ್ಲಿಗೆ ಬರಬೇಕು" ಎಂದು ಮೈನಾವತಿ ಬರೆದಿದ್ದಳು.

ಅಕ್ಕಿ ತೆಗೆದುಕೂಂಡು ಸೈರ ಮನೆಗೆ ಬಂದರು.

ಹೊತ್ತು ಮುಳುಗುವ ಸಮಯಕ್ಕೆ ರಾಜನ ಮಗನು ಮಹಾದೇವನ ಗುಡಿಗೆ ಹೋಗುತ್ತಾನೆ. ಜರದ ಸೀರೆಯುಟ್ಟು ಕೈಯಲ್ಲಿ ಆರತಿ ಹಿಡಕೊಂಡು ಮೈನಾವತಿ ಗುಡಿಗೆ ಹೋಗುತ್ತಾಳೆ. ಅವಳು ಹೋಗುವುದನ್ನು ನೋಡಿದ ಓಲೆಕಾರನೊಬ್ಬನು ಅವಳ ಬೆನ್ನ ಹಿಂದೆ ತಾನೂ ಗುಡಿಗೆ ಹೋಗುತ್ತಾನೆ. ರಾಜನ ಮಗನೂ ಗುಡಿಯೊಳಕ್ಕೆ ಹೋಗುವುದನ್ನು ಕಂಡ ಓಲೆಕಾರನು - ಹೆಂಗಸೊಬ್ಬಳು ಗಂಡಸರಿದ್ದ ಗುಡಿಯೊಳಕ್ಕೆ ಹೋಗಿದ್ದಾಳೆಂದು ಬೊಬ್ಬಾಟ ಮಾಡುತ್ತಾನೆ. ಗಸ್ತಿಯಾಳುಗಳು ನಾಲ್ವರು ಅಲ್ಲಿ ಕಾವಲು ಕುಳಿತುಕೊಳ್ಳುತ್ತಾರೆ.

ಅದೆಷ್ಟು ಹೊತ್ತಾದರೂ ಮೈನಾವತಿ ಹೊರಗೆ ಬರಲಿಲ್ಲ. ಗಸ್ತಿಯಾಳುಗಳೆಲ್ಲ ತಿರುಗಿ ಹೋದರು.

“ಹೂವಿನ ಬನದಾಗ ಸೈರೇ ದನ ಬಂದಾದ. ಅದನ್ನು ಬಿಡಿಸಿಕೊಂಡು ಬಾ” ಎಂದು ಪ್ರಧಾನಿಯ ಮಗ ಹೂಗಾರ ಮುದುಕಿಗೆ ಬೆನ್ನು ಬೀಳುತ್ತಾನೆ. ಮುದುಕಿ ಹೊರಗೆ ಹೋದಕೂಡಲೇ ಪ್ರಧಾನಿಯ ಮಗನು ಅವಳದೊಂದು ಸೀರೆ ಉಟ್ಟುಕೊಂಡು ಗುಡಿಗೆ ಹೋಗುತ್ತಾನೆ. ಅಲ್ಲಿ ಕುಳಿತವರು ಅವನನ್ನು ಒಳಗೆ ಬಿಡುವುದಿಲ್ಲ.