ಕುದುರೆಯ ಕಾಲಕಸವನ್ನು ಬಳೆದರೆ ಒಂದು ರೂಪಾಯಿ" ಎಂದು ಹೇಳಿ, ಗಂಡನ ಕೈಯಿಂದ ಕೆಲಸ ಮಾಡಿಸಿಕೊಂಡಳು. ಹೀಗೆ ಪ್ರತಿಯೊಂದು ಕೆಲಸಕ್ಕೆ ಒಂದೊಂದು ರೂಪಾಯಿ ಕೊಡುತ್ತ ಬಂದಳು.
ಎಂಟು ದಿನಗಳಲ್ಲಿ ಅವನು ನೂರು ರೂಪಾಯಿ ಗಳಿಸಿಬಿಟ್ಟನು.
ಎರಡು ಕುದುರೆಗಳ ಮೇಲೆ ಕಳ್ಳನ ಮನೆಯೊಳಗಿನ ಸಂಪತ್ತನ್ನೆಲ್ಲ ಹೇರಿಸಿ, ಹೆಣ್ನುಮಗಳು ಮುಂದೆ ಮುಂದೆ ಹೋದಳು. ಗಂಡ ಮಾತ್ರ ಹಿಂದಿನಿಂದ ಹೋದನು.
ಹೆಂಡತಿ ಹೇಳಿದಂತೆ ಈಗ ನೂರು ರೂಪಾಯಿ ಗಳಿಸಿ ತಂದಿದ್ದಾನೆ. ಹೆಂಡತಿಗೆ ಪಾಪಾಸಿನಿಂದ ಹೊಡೆಯಲು ಮುಂದೆ ಬಂದಿದ್ದಾನೆ.—"ನೂರಾರು ರೂಪಾಯಿ ತಂದಿರುವೆ. ಸೆರಗು ತೆಗೆ ಹೊಡೆಯುತ್ತೇನೆ" ಎಂದು ಒತ್ತಾಯ ಮಾಡಹತ್ತಿದನು.
"ಯಾವ ರೀತಿ ಗಳಿಸಿಕೊಂಡ ಬಂದಿರುವ ಮೊದಲು ಹೇಳು. ಆಮೇಲೆ ನಿನ್ನ ಕೈಯಿಂದ ಹೊಡಿಸಿಕೊಳ್ಳಲು ನಾನು ಸಿದ್ದಳಾಗಿದ್ದೇನೆ" ಎಂದು ಹೆಂಡತಿ ನುಡಿದಳು.
ಗಂಡನು ನಿರುತ್ತರನಾಗಿ ನಿಂತನು.
"ನೀನು ಕುದುರೆ ಒರೆಸಿದಿ, ಒಂದು ರೂಪಾಯಿ ಗಳಿಸಿದಿ. ಅದರ ಲದ್ದಿ ತೆಗೆದಿ. ಯಾರದೋ ಕೈಕಾಲು ಒತ್ತಿದಿ. ಇಷ್ಟೆಲ್ಲ ಮಾಡಿ ನೂರು ರೂಪಾಯಿ ತಂದಿರುವಿ" ಎಂದು ಹೆಂಡತಿ ಹೇಳಿಕೊಟ್ಟಾಗ ಗಂಡನು ಗಾಬರಿಗೊಂಡು ಕುಳಿತನು. ಪಾಪಾಸಿನಿಂದ ಹೊಡೆಯುವ ಹವ್ಯಾಸವನ್ನು ಬಿಟ್ಟುಕೊಟ್ಟನು.