ಅಂಗಕ್ಕೆ ಆಚಾರವೆ ಆಶ್ರಯ.
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಗಕ್ಕೆ ಆಚಾರವೆ ಆಶ್ರಯ. ಆಚಾರಕ್ಕೆ ಪ್ರಾಣವೆ ಆಶ್ರಯ. ಪ್ರಾಣಕ್ಕೆ ಜ್ಞಾನವೆ ಆಶ್ರಯ. ಜ್ಞಾನಕ್ಕೆ ಲಿಂಗವೆ ಆಶ್ರಯ. ಲಿಂಗಕ್ಕೆ ಜಂಗಮವೆ ಆಶ್ರಯ. ಇಂತೀ ಪಂಚಲಕ್ಷಣ ಪರಿಪೂರ್ಣವಾಗಿರಬಲ್ಲಡೆ ಸದ್ಭಕ್ತನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.