ಅಂಗದಲಪ್ಪಿದೆನೆಂದಡೆ ಸಿಲುಕದು, ಪ್ರಾಣದಲಪ್ಪಿದೆನೆಂದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗದಲಪ್ಪಿದೆನೆಂದಡೆ ಸಿಲುಕದು
ಪ್ರಾಣದಲಪ್ಪಿದೆನೆಂದಡೆ ಸಿಲುಕದು
ಭಾವದಲಪ್ಪಿದೆನೆಂದಡೆ ಸಿಲುಕದು
ಸೂಕ್ಷ್ಮತನುವಿನ ಮನದ ಕೊನೆಯ ಮೇಲೆ ಅಪ್ಪಿದೆನೆಂದಡೆ ಸಿಲುಕದು. ಭಾವಾತೀತವಾದ ನಿರಾಕಾರದ ಘನವು ಸುಜ್ಞಾನದ ಮುಖಕ್ಕೆ ಅಸಾಧ್ಯ ನೋಡಾ ! ಗುಹೇಶ್ವರನ ಶರಣರನಿನ್ನಾವ ಪರಿಯಲ್ಲಿ ತಡೆದು ನಿಲ್ಲಿಸುವೆ ಹೇಳಾ_ ಸಿದ್ಧರಾಮಯ್ಯಾ ?