ವಿಷಯಕ್ಕೆ ಹೋಗು

ಅಂಗದಲ್ಲಿ ಲಿಂಗಸಂಗ, ಲಿಂಗದಲ್ಲಿ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಂಗದಲ್ಲಿ ಲಿಂಗಸಂಗ
ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ
ಸಂದು ಭೇದವಳಿವ ಪರಿ ಎಂತು ಹೇಳಾ ಅಂಗದಲ್ಲಿ ಸಂಗವ ಮಾಡಿಹೆನೆಂದಡೆ
ಮುಂದುಗೆಡಿಸಿ ಕಾಡುವನು ಶಿವನು. ಕಾಮವೆಂಬ ಬಯಕೆಯಲ್ಲಿ ಅಳಲಿಸುವ ಬಳಲಿಸುವ ಶಿವನು. ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ
ಅಂಗದಿಂದ ಅತ್ತತ್ತಲೋಸರಿಸಿ ಓಡುವನಯ್ಯಾ ಶಿವನು. ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು. ಕೂಡಲಸಂಗಮದೇವರ ಬೆರಸುವಡೆ
ಬ್ಥಿನ್ನವಿಲ್ಲದೆ ಕಲಿಯಾಗಿರಬೇಕು ಕೇಳಾ ಅವ್ವಾ.