ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು
ಕಂಗಳಿಚ್ಛೆಗೆ ಪರವಧುವ ನೆರೆವರು.
ಲಿಂಗಲಾಂಛನಧಾರಿಯಾದಲ್ಲಿ ಫಲವೇನು ಲಿಂಗಪಥವ ತಪ್ಪಿ ನಡೆವವರು
ಜಂಗಮಮುಖದಿಂದ ನಿಂದೆ ಬಂದಡೆ
ಕೊಂಡ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವಾ. 106