ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು,
ಗೋಚರ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು
ಕಂಗಳಿಚ್ಛೆಗೆ ಪರವಧುವ ನೆರೆವರು. ಲಿಂಗಲಾಂಛನಧಾರಿಯಾದಲ್ಲಿ ಫಲವೇನು ಲಿಂಗಪಥವ ತಪ್ಪಿ ನಡೆವವರು ಜಂಗಮಮುಖದಿಂದ ನಿಂದೆ ಬಂದಡೆ ಕೊಂಡ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವಾ. 106