Library-logo-blue-outline.png
View-refresh.svg
Transclusion_Status_Detection_Tool

ಅಂಗದೊಳಗೆ ಲಿಂಗ ಲಿಂಗದೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಂಗದೊಳಗೆ ಲಿಂಗ ಲಿಂಗದೊಳಗೆ ಅಂಗ ! ಅಂಗವಿಲ್ಲದೆ ಬೇರೆ ಸಂಗವಿಲ್ಲ ಕಾಣಿರೆ. ಅದೆಂತೆಂದಡೆ; ``ಲಿಂಗಸ್ಥಲಂ ಶಿವಃ ಸಾಕ್ಷಾತ್ ಜೀವಾತ್ಮಾಂಗಸ್ಥಲಂ ಭವೇತ್ ಲಿಂಗಾಂಗಸ್ಥಲಯೋರೈಕ್ಯಂ ಶಿವಜೀವೈಕ್ಯಮೇವಹಿ ಎಂದುದಾಗಿ. ಲಿಂಗವಿದ್ದೆಡೆಯ ನೀವು ತಿಳಿದು ನೋಡಿ ಕೂಡಿಕೊಳ್ಳಿ. ಕಾಯವಳಿಯದ ಮುನ್ನವೆ ಕೂಡಿಕೊಳ್ಳಬಲ್ಲಡೆ
ಗುಹೇಶ್ವರನು ಬೇರಿಲ್ಲ ಕಾಣಿರೆ.