ಅಂಗದ ಕಳೆಯಲೊಂದು ಲಿಂಗವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗದ ಕಳೆಯಲೊಂದು ಲಿಂಗವ ಕಂಡೆ. ಲಿಂಗದ ಕಳೆಯಲೊಂದು ಅಂಗವ ಕಂಡೆ. ಅಂಗ ಲಿಂಗ[ದ]ಸಂದಣಿಯನರಸಿ ಕಂಡೆ
ನೋಡಿರೆ. ಇಲ್ಲಿಯೆ ಇದಾನೆ ಶಿವನು ! ಬಲ್ಲಡೆ ಇರಿಸಿಕೊಳ್ಳಿರೆ; ಕಾಯವಳಿಯದ ಮುನ್ನ ನೋಡಬಲ್ಲಡೆ. ಗುಹೇಶ್ವರಲಿಂಗಕ್ಕೆ ಬೇರೆಠಾವುಂಟೆ ಹೇಳಿರೆ ?