ವಿಷಯಕ್ಕೆ ಹೋಗು

ಅಂಗದ ಮೇಲೆ ಲಿಂಗವುಳ್ಳುದೆಲ್ಲಾ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಂಗದ ಮೇಲೆ ಲಿಂಗವುಳ್ಳುದೆಲ್ಲಾ ಸಂಗಮನಾಥನೆಂಬ ಭಾವ ಬಸವಣ್ಣಂಗಾಯಿತ್ತಲ್ಲದೆ
ಎನಗೆ ಆ ಭಾವವಿಲ್ಲ ನೋಡಾ. ಲಿಂಗೈಕ್ಯ ಶರಣರ ಕಂಡಡೆ ಕರುಣಾಮೃತ ಸುರಿವುದೆನಗೆ. ಅವರ ಪಾದಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡುವದೆನ್ನ ಮನವು. ಕೂಡಲಚೆನ್ನಸಂಗಮದೇವಾ
ನಿಮ್ಮ ಶರಣ ಪ್ರಭುವೆಂಬ ಜಂಗಮವ ಕಂಡು ಪೂಜಿಸಿ ಪೂಜಿಸಿ ದಣಿಯದೆನ್ನ ಮನವು.