ಅಂಗದ ಲಿಂಗವೆ ಮನದ
ಗೋಚರ
ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಅಂಗದ ಲಿಂಗವೆ ಮನದ ಲಿಂಗ
ಮನದ ಲಿಂಗವೆ ಭಾವದ ಲಿಂಗ
ಭಾವದ ಲಿಂಗವೆ ಜಂಗಮದಾಸೋಹ
ದಾಸೋಹವೆಂಬುದು ಸಂದಿಲ್ಲದ ನಿಜ ನೋಡಾ. ಅದರಂದವನೆ ತಿಳಿದು ನಿಂದ ನಿಲುಕಡೆಯ ಭೇದವ ಕೇಳಬೇಕೆಂದು ಬಂದಲ್ಲಿಯೆ ತಿಳುಹಬೇಕಯ್ಯಾ. ಇಂತೀ ಪ್ರಕಾರದಲ್ಲಿ ಸಂದ ಸೌಖ್ಯದ ಭೇದವನು
ಸಂದಿಲ್ಲದ ಲಿಂಗದ ನಿಜವನು
ಇಂದು ನಮ್ಮ ಗುಹೇಶ್ವರಲಿಂಗದಲ್ಲಿ ಚಂದಯ್ಯಂಗೆ ತಿಳುಹಿ ಕೊಡಾ ಚೆನ್ನಬಸವಣ್ಣಾ.