ಅಂಗನೆಯ ಚಿತ್ತ, ರಮಣನ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಗನೆಯ ಚಿತ್ತ
ರಮಣನ ಸುತ್ತಿಮುತ್ತಿ ಅಪ್ಪಿ ಅಗಲದಿಪ್ಪಂತೆ ಜಾಗ್ರ
ಸ್ವಪ್ನ
ಸುಷುಪ್ತಿಯಲ್ಲಿ ಶರಣ ಚಿತ್ತರತಿ ಶಿವಲಿಂಗವ ಸುತ್ತಿ ಮುತ್ತಿ ಅಪ್ಪಿ ಅಗಲದಿಪ್ಪರೆ ಆ ಮಹಾತ್ಮನ ಏನೆಂದುಪಮಿಸುವೆನಯ್ಯ? ಲಿಂಗಪ್ರಾಣಿಯ
ಪ್ರಾಣಲಿಂಗಸಂಬಂದ್ಥಿಯ? ಸ್ವತಂತ್ರ ವಸ್ತುವಿನಲ್ಲಿ ಅರಿವರತು ಬೆರಗು ನಿಬ್ಬೆರಗಾದ
ಘನಲಿಂಗಪ್ರಾಣಿಗೆ ನಮೋ ನಮೋಯೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.