ಅಂಗನೆಯ ಮೊಲೆ ಲಿಂಗವೆ

ವಿಕಿಸೋರ್ಸ್ದಿಂದ



Pages   (key to Page Status)   


ಅಂಗನೆಯ ಮೊಲೆ ಲಿಂಗವೆ ? ಬಳ್ಳ ಲಿಂಗವೆ ? ಕಿತ್ತು ಬಹ ಸಾಣೆ ಲಿಂಗವೆ ? ಆಡಿನ ಹಿಕ್ಕಿ ಲಿಂಗವೆ ? ಮೆಚ್ಚುವರೆ ಪ್ರಮಥರು ? ಮೆಚ್ಚುವರೆ ಪುರಾತನರು
ನಿಮ್ಮ ಭಕ್ತರು ? ಭಾವಭ್ರಮೆಯಳಿದು
ಗುಹೇಶ್ವರಾ ನಿಮ್ಮಲ್ಲಿ ಅನಾದಿಸಂಸಿದ್ಧವಾದ ಜಂಗಮವನರಿದಾತ ಬಸವಣ್ಣನೊಬ್ಬನೆ.