ಅಂಗಭೋಗವನೆ ಕುಂದಿಸಿ ಪ್ರಸಾದವನು ರುಚಿಸುವೆವೆಂಬ ಲಿಂಗವಂತರೆಲ್ಲ ಅರಿವುಗೇಡಿಗಳಾಗಿ ಹೋದರು. ಅಂಗಭೋಗವೆ ಲಿಂಗಭೋಗ
ಅಂಗಭೋಗವು [ಲಿಂಗಕ್ಕೆ] ಅರ್ಪಿತವಾಗಿ. ಸ್ವಕೀಯ ಪಾಕಸಂಬಂಧಭೋಗೋ ಜಂಗಮವರ್ಜಿತಃ ನಾಸ್ತಿ ಲಿಂಗಾರ್ಚನಂ ಚೈವ ಪ್ರಸಾದೋ ನಿಷ್ಫಲೋ ಭವೇತ್ ಅಂಗಕ್ಕೆ ಬಂದ ರುಚಿ
ಲಿಂಗಕ್ಕೆ ಬಾರದೆ ? ಇದು ಕಾರಣ_ಕೂಡಲಚೆನ್ನಸಂಗಯ್ಯಾ ಪಾಕಸಂಬಂಧಿಗೆ ಪ್ರಸಾದ ದೂರ.