ವಿಷಯಕ್ಕೆ ಹೋಗು

ಅಂಗಯ್ಯ ಒಳಗಣ ಲಿಂಗವ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಂಗಯ್ಯ ಒಳಗಣ ಲಿಂಗವ ನೋಡುತ್ತ
ಕಂಗಳು ಕಡೆಗೋಡಿವರಿಯುತ್ತ ಸುರಿಯುತ್ತ ಎಂದಿಪ್ಪೆನೊ ನೋಟವೆ ಪ್ರಾಣವಾಗಿ ಎಂದಿಪ್ಪೆನೊ ಕೂಟವೇ ಪ್ರಾಣವಾಗಿ ಎಂದಿಪ್ಪೆನೊ ಎನ್ನ ಅಂಗವಿಕಾರದ ಸಂಗವಳಿದು
ಕೂಡಲಸಂಗಯ್ಯಾ
ಲಿಂಗ ಲಿಂಗವೆನುತ್ತ. 485