ವಿಷಯಕ್ಕೆ ಹೋಗು

ಅಂಗಲಿಂಗಸಂಗಸುಖಸಾರಾಯದನುಭಾವ ಲಿಂಗವಂತಂಗಲ್ಲದೆ ಸಾಧ್ಯವಾಗದು ನೋಡಾ. ಏಕಲಿಂಗಪರಿಗ್ರಾಹಕನಾದ ಬಳಿಕ

ವಿಕಿಸೋರ್ಸ್ದಿಂದ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಂಗಲಿಂಗಸಂಗಸುಖಸಾರಾಯದನುಭಾವ ಲಿಂಗವಂತಂಗಲ್ಲದೆ ಸಾಧ್ಯವಾಗದು ನೋಡಾ. ಏಕಲಿಂಗಪರಿಗ್ರಾಹಕನಾದ ಬಳಿಕ

ಆ ಲಿಂಗನಿಷೆ* ಗಟ್ಟಿಗೊಂಡು 
ಸ್ವಯಲಿಂಗಾರ್ಚನೋಪಚಾರ ಅರ್ಪಿತ ಪ್ರಸಾದಭೋಗಿಯಾಗಿ
ವೀರಶೈವಸಂಪನ್ನನೆನಿಸಿ ಲಿಂಗವಂತನಾದ ಬಳಿಕ ತನ್ನಂಗಲಿಂಗಸಂಬಂಧಕ್ಕನ್ಯವಾದ ಜಡಭೌತಿಕ ಪ್ರತಿಷೆ*ಯನುಳ್ಳ ಭವಿಶೈವದೈವಕ್ಷೇತ್ರತೀರ್ಥಂಗಳಾದಿಯಾದ ಹಲವು ಲಿಂಗಾರ್ಚನೆಯ ಮನದಲ್ಲಿ ನೆನೆ[ಯ]ಲಿಲ್ಲ
ಮಾಡಲೆಂತೂ ಬಾರದು. ಇಷ್ಟೂ ಗುಣವಳವಟ್ಟಿತ್ತಾದಡೆ ಆತನೀಗ ಏಕಲಿಂಗನಿಷಾ*ಚಾರಯುಕ್ತನಾದ ವೀರಮಾಹೇಶ್ವರನು. ಇವರೊಳಗೆ ಅನುಸರಿಸಿಕೊಂಡು ನಡೆದನಾದಡೆ ಗುರುಲಿಂಗಜಂಗಮಪಾದೋದಕಪ್ರಸಾದ ಸದ್ಭಕ್ತಿಯುಕ್ತವಾದ ವೀರಶೈವ ಷಡುಸ್ಥಲಕ್ಕೆ ಹೊರಗಾಗಿ ನರಕಕ್ಕಿಳಿವನು ಕಾಣಾ
ಕೂಡಲಸಂಗಮದೇವಾ.